Breking news

ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

*ಬಾಲಕಾರ್ಮಿಕ ನಿರ್ಮೂಲನೆಗೆ ಕಾನೂನು ಜಾಗೃತಿ ಅಗತ್ಯ: ಬಸವರಾಜ ಎಸ್.ಎಂ.*

*ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ*

*ಬಾಲಕಾರ್ಮಿಕ ನಿರ್ಮೂಲನೆಗೆ ಕಾನೂನು ಜಾಗೃತಿ ಅಗತ್ಯ: ಬಸವರಾಜ ಎಸ್.ಎಂ.*

ಕೊಪ್ಪಳ, ಜೂನ್ 13: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜಾಗತಿಕ ಮಟ್ಟದಲ್ಲಿ ಕಾನೂನು ಜಾಗೃತಿ ಮೂಡಿಸುವ ಉದ್ದೇಶದಿಂದ ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) 2002ರಿಂದ ಈ ದಿನಾಚರಣೆಯನ್ನು ಆರಂಭಿಸಿದೆ , ಬಾಲಕಾರ್ಮಿಕ ನಿರ್ಮೂಲನೆಗೆ ಕಾನೂನು ಜಾಗೃತಿ ಅಗತ್ಯ ಎಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದ ಉಪ ಪ್ರಾಚಾರ್ಯರಾದ ಬಸವರಾಜ ಎಸ್.ಎಂ. ಅವರು ಹೇಳಿದರು.

ಅವರು ಶನಿವಾರದಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಯುವ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಇಲ್ಲಿನ ಡಿ.ಬಿ.ಹೆಚ್.ಪಿ ಕಾಲೇಜಿನ ಆವರಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಭಾರತ ಸಂವಿಧಾನದ ಅನುಚ್ಛೇದ 23 ಮತ್ತು 24ರ ಅಂಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಬಾಲಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸುವುದನ್ನು ತಡೆಗಟ್ಟುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು. ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ-1986 ಹಾಗೂ 2016ರ ತಿದ್ದುಪಡಿ ಕಾಯ್ದೆಯ ಕುರಿತು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಎಸ್. ಸೊಪ್ಪಿಮಠ, ಮಹಾಂತೇಶ್ ಎಸ್.ಎಂ., ಕುಮಾರಸ್ವಾಮಿ, ಶಾಲಿನಿ ಪಾಟೀಲ್, ಸೋಮಶೇಖರ್ ರಾಜು ಯು., ಅನುಸೂಯ ಕೆರಿ, ಸಿಬ್ಬಂದಿಗಳಾದ ಮಾರುತಿ ಮೆಟಿಗೇರಿ, ಋತು ಸುರುವೇ, ಪೂರ್ಣಿಮಾ ಪಾಟೀಲ್ ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ನಂತರ ಎಲ್ಲರಿಗೂ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಕುರಿತು ಪ್ರಮಾಣವಚನ ಬೋಧಿಸಿದರು.

Related Articles

Leave a Reply

Your email address will not be published. Required fields are marked *

Back to top button