ಕೆಯುಡಬ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಉತ್ತಮ ವರದಿಗಾರ ಪ್ರಶಸ್ತಿಗೆ ಬ್ರಹ್ಮಾನಂದ ಬಡಿಗೇರ ಆಯ್ಕೆ…

ಕೆಯುಡಬ್ಲ್ಯೂಜೆ ಜಿಲ್ಲಾ ಮಟ್ಟದ ವಾರ್ಷಿಕ ಉತ್ತಮ ವರದಿಗಾರ ಪ್ರಶಸ್ತಿಗೆ ಬ್ರಹ್ಮಾನಂದ ಬಡಿಗೇರ ಈಶಾನ್ಯ ಟೈಮ್ಸ್ ಇವರು ಆಯ್ಕೆ…
ಕೊಪ್ಪಳ,: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಜಿಲ್ಲಾ ಘಟಕ ಕೊಪ್ಪಳ ವತಿಯಿಂದ ಪ್ರತಿ ವರ್ಷ ಪತ್ರಿಕಾ ದಿನಾಚರಣೆ ಅಂಗವಾಗಿ
ಕೂಡ ಮಾಡುವ ಕೆಯುಡಬ್ಲ್ಯೂಜೆ ವಾರ್ಷಿಕ ಉತ್ತಮ ವರದಿಗಾರ ಪ್ರಶಸ್ತಿಗೆ ಬ್ರಹ್ಮಾನಂದ ಬಡಿಗೇರ ಈಶಾನ್ಯ ಟೈಮ್ಸ್ ಜಿಲ್ಲಾ ವರದಿಗಾರ ಕೊಪ್ಪಳ ಇವರನ್ನು ಆಯ್ಕೆ ಮಾಡಲಾಗಿದೆ. ಪತ್ರಕರ್ತರಾದ ಇವರು ಹಲವಾರು ಸಾಮಾಜ ದ್ವನಿಯಾಗಿ ವಿವಿಧ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಉತ್ತಮ ವರದಿಗಾರಿಕೆ, ಬರಹಗಳಿಗೆ ಉತ್ತಮ ವರದಿಗೆ ಪ್ರಶಸ್ತಿ ಲಭಿಸಿದೆ. ಕೊಪ್ಪಳ ಜಿಲ್ಲಾ ಘಟಕದಿಂದ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರಿಸಲಾಗುತ್ತದೆ. ಬ್ರಹ್ಮಾನಂದ ಬಡಿಗೇರ ಅವರು ಪ್ರಶಸ್ತಿ ಆಯ್ಕೆ ಸಮಿತಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ, ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಸರ್ವ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.



