Breking news

ಕನಕಗಿರಿ ಉತ್ಸವದ ಲೋಗೋ ಬಿಡುಗಡೆ ಮಾಡಿದ ಸಚಿವ ಶಿವರಾಜ್ ಎಸ್. ತಂಗಡಗಿ

ಕನಕಗಿರಿ ಉತ್ಸವದ ಲೋಗೋ ಬಿಡುಗಡೆ ಮಾಡಿದ ಸಚಿವ ಶಿವರಾಜ್ ಎಸ್. ತಂಗಡಗಿ

ಕೊಪ್ಪಳ ಏಪ್ರಿಲ್ 27 : ಇದೇ ಮೇ 16 ಮತ್ತು 17 ರಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ಒಳಗೊಂಡ ಕನಕಗಿರಿ ಉತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲು ಸಕಲ ಸಿದ್ಧತೆಗಳು ಆರಂಭಗೊAಡಿದ್ದು, ಇದರ ಅಂಗವಾಗಿ ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವದ ಅಧಿಕೃತ ಲೋಗೋವನ್ನು ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button