ಕೊಪ್ಪಳ ಸುದ್ದಿ

ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಎಡಿಸಿ ಸಿದ್ರಾಮೇಶ್ವರ

ಕೊಪ್ಪಳ ಫೆಬ್ರವರಿ 06, : ಜಿಲ್ಲಾಡಳಿತದ ವತಿಯಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 1 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಂಬAಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದ ಮುಖಂಡರ ಆಶಯದಂತೆ ಜಿಲ್ಲಾ ಮಟ್ಟದ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ಶ್ರೀ ರೇಣುಕಾಚಾರ್ಯ ಅವರ ಭಾವಚಿತ್ರದ ಮೆರವಣಿಗೆಯು ನಗರದ ಗವಿಮಠದಿಂದ ಪ್ರಾರಂಭಗೊAಡು ಜವಾಹರ ರಸ್ತೆ ಮೂಲಕ ಅಶೋಕ ವೃತ್ತದವರೆಗೆ ಜರುಗಲಿದೆ. ಬಳಿಕ 10.30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪೂಜೆ, ಶ್ರೀ ರೇಣುಕಾಚಾರ್ಯರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.
ಸಮಾರಂಭ ದಿನದಂದು, ಮೆರವಣಿಗೆ ಮಾರ್ಗದ ಸ್ವಚ್ಛತೆ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಒದಗಿಸಬೇಕು. ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬAಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ರೇಣುಕಾಚಾರ್ಯರ ಸಮಾಜದ ಮುಖಂಡರಾದ ಹಂಪಯ್ಯ ಮೆತಗಲ್ಲ, ಬಸವರಾಜ ಗೌರಿಮಠ, ಶಿವಕುಮಾರ್ ಹಿರೇಮಠ, ನೀಲಕಂಠಯ್ಯ ಹಿರೇಮಠ, ನಾಗಭೂಷಣ ಸಾಲಿಮಠ, ಎಸ್.ಎಸ್. ಹಿರೇಮಠ, ಗಿರೀಶ ಹಿರೇಮಠ, ದಯಾನಂದ ಸಿ.ಎಸ್., ನಾಗಬಸಯ್ಯ, ರವಿ ಹಿರೇಮಠ್, ಅರುಣಕುಮಾರ್, ಶರಣಯ್ಯ ಹಿರೇಮಠ, ಸೇರಿದಂತೆ ಮತ್ತಿತರರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Siddu Hiremath

ಇದು ಒಂದು ಸುದ್ದಿ ಹಾಗೂ ಮನೋರಂಜನೆ ನೀಡುವ ಡಿಜಿಟಲ್ ವಾಹಿನಿ ಆಗಿದೆ

Related Articles

Leave a Reply

Your email address will not be published. Required fields are marked *

Back to top button