ಶಿವಪುರ: ಅದ್ಧೂರಿಯಾಗಿ ನೆಡೆದ ಶ್ರೀ ಮಾರ್ಕೆಂಡೇಶ್ವರ ರಥೋತ್ಸವ

ಶಿವಪುರ: ಅದ್ಧೂರಿಯಾಗಿ ನೆಡೆದ ಶ್ರೀ ಮಾರ್ಕೆಂಡೇಶ್ವರ ರಥೋತ್ಸವ
ಮುನಿರಾಬಾದ್: ಸಮೀಪದ ಶಿವಪುರ ಗ್ರಾಮದ ಶ್ರೀ ಮಾರ್ಕಂಡೇಶ್ವರ ಸ್ವಾಮಿಯ ರಥೋತ್ಸವವು ಸೋಮವಾರ ಅತ್ಯಂತ ಸಡಗರ, ಸಂಭ್ರಮ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಜಾತ್ರೆಯ ಅಂಗವಾಗಿ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಶ್ರೀ ಮಾರ್ಕಂಡೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಹರ ಹರ ಮಹಾದೇವ ಘೋಷಣೆಗಳ ನಡುವೆ, ಸಕಲ ವಾದ್ಯಗೋಷ್ಠಿಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು.
ವಿಜೃಂಬಣೆಯಿಂದ ನೆರವೇರಿದ ರಥೋತ್ಸವ:
ಸಾಯಂಕಾಲ ನಿಗದಿತ ಶುಭ ಮುಹೂರ್ತದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥವು ಸಾಗುವ ಹಾದಿಯುದ್ದಕ್ಕೂ ಭಕ್ತರು ಉತ್ತತ್ತಿ, ಬಾಳೆಹಣ್ಣು ಹಾಗೂ ಹೂವುಗಳನ್ನು ರಥಕ್ಕೆ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಶಿವಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ಅತ್ಯಂತ ಸಡಗರ ಸಂಭ್ರಮದಿಂದ ರಥೋತ್ಸವ ನೆರವೇರಿತು.
ಪೋಟೋ
ಶಿವಪುರ ಗ್ರಾಮದಲ್ಲಿ ಸೋಮವಾರ ಶ್ರೀ ಮಾರ್ಕಂಡೇಶ್ವರ ಸ್ವಾಮಿಯ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು.




