news

ರಾಜ್ಯ ಬಜೆಟ್ ನಲ್ಲಿ ಲಿಂಗತ್ವ, ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ಮೀಸಲಿಡಿ : ರಮ್ಯಾ ಒತ್ತಾಯ

ರಾಜ್ಯ ಬಜೆಟ್ ನಲ್ಲಿ ಲಿಂಗತ್ವ, ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ಮೀಸಲಿಡಿ : ರಮ್ಯಾ ಒತ್ತಾಯ

ಕೊಪ್ಪಳ : 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಲಿಂಗತ್ವ, ಲೈಂಗಿಕ ಅಲ್ಪಸಂಖ್ಯಾತರಿಗೆ ಈ ಬಾರಿ 200 ಕೋಟಿ ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಮುಖಂಡರಾದ ರಮ್ಯಾ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಅವರು ಶುಕ್ರವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಎರಡು ನೂರು ಕೋಟಿಯನ್ನು ಮೀಸಲಿಡುವುದಾಗಿ ಘೋಷಿಸಿತ್ತು, ಆದರೆ ವಾಗ್ದಾನ ಮಾಡಿದ ಸರಕಾರ ಈಗ ತನ್ನ ಮಾತು ಉಳಿಸಿಕೊಳ್ಳುವ ಹೊಣೆಗಾರಿಕೆಯಿಂದ ಎಂದು ಸರಿಯಬಾರದು ಈ ಬಾರಿ ಬಜೆಟ್ಟಿನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕವಾಗಿ ಮತ್ತು ಕಡ್ಡಾಯವಾಗಿ ಅನುದಾನ ಘೋಷಿಸಬೇಕು, ವಿವಿಧ ಬೇಡಿಕೆಗಳಾದ ಕರ್ನಾಟಕ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವನ್ನು ತಕ್ಷಣ ಸ್ಥಾಪಿಸಬೇಕು, ಅಭಿವೃದ್ಧಿಗಾಗಿ 250 ಕೋಟಿಗಳ ಪ್ರತ್ಯೇಕ ಬಜೆಟ್ ನೀಡಬೇಕು, ವಸತಿ, ಹಾಸ್ಟೆಲ್, ಶಾರ್ಟ್ ಸ್ಟೇ ಹೋಮ್ ಗಳನ್ನು ತಕ್ಷಣ ಒದಗಿಸಬೇಕು, ಪ್ರತಿ ವರ್ಷ ಕನಿಷ್ಠ 500 ಮನೆಗಳನ್ನು ಹಂಚಿಕೆ ಮಾಡಬೇಕು ಎಂದರು.

ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಮುಖಂಡರಾದ ಆರಾಧನಾ ‌ಮಾತನಾಡಿ ಕೃಷಿಯಲ್ಲಿ ಆಸಕ್ತಿ ಹೊಂದಿರುವ ಪ್ರತಿಯೊಬ್ಬರಿಗೆ ಎರಡು ಎಕರೆ ಕೃಷಿಗೆ ಯೋಗ್ಯ ಭೂಮಿಯನ್ನು ನೀಡಬೇಕು, ಮೈತ್ರಿ ಪಿಂಚಣಿಯನ್ನು ತಿಂಗಳಿಗೆ 2000 ಕ್ಕೆ ಹೆಚ್ಚಿಸಬೇಕು, ಲಿಂಗತ್ವ ಅಲ್ಪಸಂಖ್ಯಾತರಿಗೆ ತಿಂಗಳಿಗೆ 5000 ವೃದ್ಯಾಪ ಪಿಂಚಣಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈ ಬಾರಿ ಬಜೆಟ್ ನಲ್ಲಿ ಒದಗಿಸುವಂತೆ ರಾಜ್ಯ ಸರ್ಕಾರವನ್ನು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಹೋರಾಟಗಾರರು ಹಾಗೂ ನಿವೃತ್ತ ಪ್ರಾಚಾರ್ಯ ಅಲ್ಲಮಪ್ರಭು ಬೆಟ್ಟದೂರ, ಮಂಜುನಾಥ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button