ಸಮಾನತೆಯ ಹರಿಕಾರ ‘ಹಸಿರು ಕ್ರಾಂತಿ’ಯ ರೂವಾರಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಆಚರಣೆ

ಸಮಾನತೆಯ ಹರಿಕಾರ ‘ಹಸಿರು ಕ್ರಾಂತಿ’ಯ ರೂವಾರಿ
ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಆಚರಣೆ
ಕೊಪ್ಪಳ. ಏಪ್ರಿಲ್.05: ಭಾರತದ ರಾಜಕೀಯ ಇತಿಹಾಸದ ಧ್ರುವತಾರೆ, ದಲಿತರ ಮತ್ತು ಶೋಷಿತರ ಧ್ವನಿಯಾಗಿದ್ದ
ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು
ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಬಾಬು ಜಗಜೀವನ ರಾಮ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ಮರಿಸಲಾಯಿತು.
ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಉಷಾದೇವಿ ಹಿರೇಮಠ ಅವರು ಮಾತನಾಡಿ, ಬಾಬು ಜಗಜೀವನ ರಾಮ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ದೇಶದ ಹಸಿರು ಕ್ರಾಂತಿಯ ಹಿಂದೆ ನಿಂತ ಶಕ್ತಿ. ರಕ್ಷಣಾ ಸಚಿವರಾಗಿ ಅವರು ನೀಡಿದ ಕೊಡುಗೆ ಅಪಾರ. ಅಸ್ಪೃಶ್ಯತೆ ಮತ್ತು ಸಾಮಾಜಿಕ ತಾರತಮ್ಯದ ವಿರುದ್ಧ ಅವರು ನಡೆಸಿದ ಹೋರಾಟ ಇಂದಿನ ಪೀಳಿಗೆಗೆ ಮಾದರಿಯಾಗಿದೆ, ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪಪ್ರಾಚಾರ್ಯರಾದ ಬಸವರಾಜ ಎಸ್ ಎಂ ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ರೊಟ್ಟಿ, ಸಿಬ್ಬಂದಿ ವರ್ಗದವರಾದ ಶ್ರೀಮತಿ ಪೂರ್ಣಿಮಾ ಪಾಟೀಲ್, ಮಾರುತಿ ಎನ್ ಮೆಟಿಗೇರಿ, ಕುಮಾರಿ ಋತು ಸುರುವೇ, ಶ್ರೀಮತಿ ರತ್ನ ಒಡೆಯರ್ , ಗುರುಸಿದ್ದಪ್ಪ , ಜಮ್ಮಣ್ಣ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


