Breking news
ಕ್ಯಾಮರಾಮೆನ್ ಕುಟುಂಬಕ್ಕೆ 3ಲಕ್ಷ ಪರಿಹಾರ ಮಂಜೂರು ಮಾಡಿದ ಸಿಎಂ
ಕ್ಯಾಮರಾಮೆನ್ ಕುಟುಂಬಕ್ಕೆ 3ಲಕ್ಷ ಪರಿಹಾರ ಮಂಜೂರು ಮಾಡಿದ ಸಿಎಂ
ಕ್ಯಾಮರಾಮೆನ್ ಕುಟುಂಬಕ್ಕೆ 3ಲಕ್ಷ ಪರಿಹಾರ ಮಂಜೂರು ಮಾಡಿದ ಸಿಎಂ
ಬೆಂಗಳೂರು:ಕೊಪ್ಪಳದ ಟಿವಿ 5 ಕ್ಯಾಮರಮೆನ್ ರಾಜು ಅಂಗಡಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.ಕ್ರೀಯಾಶೀಲ ರಾಜು ಅಂಗಡಿ, ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಬಗ್ಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು ನೆರವು ಕೋರಿದ್ದರು.ಸಚಿವರು&ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದ ಸಲ್ಲಿಸಿದೆ.




